ಇವಳೇ ಅವಳೇ ಇಲ್ಲಿ ಅಲ್ಲಿ ಎಲ್ಲೆಲ್ಲೂ ಇಹಪರಕೆಲ್ಲ ಮೀರಿದವಳೇ
ನೀನೆಂದರೆ, ದೇವರು ನನಗಾಗಿ ಮಾಡಿದ ಗುಣಸಮುಚ್ಛಯವೇ
ನಿನ್ನ ನೆನಪೆಂದರೆ ನಾನುತ್ತರವ ಬಯಸದ ಪ್ರಶ್ನೆಗಳ ಗುಚ್ಛವೇ ||ಪ||
ಶಬ್ದ ಸಿಗದೇ ತಡವರಿಸಿ ತೊಳಲುವುದೇ ನಿನಗೆ ಪ್ರಿಯವೇ
ಮನದ ತುಂಬ ರಂಗೇರಿಸಿದ್ದು ನಿನ್ನ ನೋಟದ ಮದರಂಗಿಯೇ
ಬರಿ ನಗೆಯಿಂದಲೇ ಎದೆಭಾರವಾಗಿಸುವುದೇ ನಿನ್ನಾಟವೇ
ಕಣ್ಣ ಮುಚ್ಚಿಯೂ ನಿನ್ನ ನೋಡುವಂತಾಗುವುದು ನಿನ್ನ ಕೃಪೆಯೇ||೧||
ನಿನ್ನ ಅನವರತ ಕನವರಿಸುತಲಿರುವುದೇ ನಿನ್ನ ಮೋಡಿಯೇ
ಏನೂ ಇರದೇ ಖುಷಿಯಾಗುವಂತಾಗುವುದೇ ನಿನ್ನ ನೆನಪೇ
ಎಲ್ಲಾ ಮರೆತು ರಾಮನ ಭಜಿಸಿದ್ದು ನಿನ್ನೊಲುಮೆಗಾಗಿಯೇ
ನನಗೇ ಗಾಬರಿಯಾಗುವಂತಾಡಿದ್ದು ನನ್ನೆದೆಯ ಕಲರವವೇ||೨||
ಎಲ್ಲಾ ಕಡೆ ನಿನ್ನನ್ನೇ ಕಂಡಂತೆ ಭ್ರಮಿಸಿದ್ದು ನನ್ನ ತಪ್ಪೇ
ತಪ್ಪು ಸರಿ ವಿವೇಚನೆ ಬದಿಗೊತ್ತಿ ಕೊರಗಿದ್ದು ನನ್ನ ವಿಧಿಯೇ
ಸೊಗಸಾದ ಸಾಂಗತ್ಯ ಭಾವಿಸಿ ಕುಣಿದಿದ್ದು ಬರಿ ಕನಸೇ
ಏನು ಮಾಡಲೆಂಬ ಅಖಂಡ ಗೊಂದಲಕೆ ನೀ ಕಾರಣವೇ||೩||
ಕವಿತೆ ಇಷ್ಟವಾಯಿತು
ReplyDeleteಎಲ್ಲಾ ಭಾವವನ್ನು ಇವಳಿಗೆ ಧಾರೆಯೆರೆದಂತಿದೆ! ಚೆನ್ನಾಗಿ ಬಂದಿದೆ ಸುಬ್ರಹ್ಮಣ್ಯ.
ReplyDelete